ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಾಗಿದ್ದು, ಸಿಎಂ ಸುಖೀಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಎಂಬ ರಾಜಕೀಯ ಪಡಸಾಲೆಯಲ್ಲಿ ಮಾತುಗಳು ಕೇಳಿಬರುತ್ತಿದೆ.
ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದು, ವಿಶ್ವಾಸಮತ ಸಾಬೀತುಪಡಿಸಲೂ ವಿಫಲವಾಗಬಹುದು ಎಂಬ ಸಾಧ್ಯತೆ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ಅವರು ಅವರ ರಾಜೀನಾಮೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿತ್ತು.
ಇದೆಲ್ಲದರ ನಡುವೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿಲ್ಲ ಎಂಬುದಾಗಿ ಸುಲ್ವಿಂದರ್ ಸಿಂಗ್ ಸುಖು ಸ್ಪಷ್ಟಪಡಿಸಿದ್ದು, ನಾನೊಬ್ಬ ಯೋಧ, ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.