ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 2ರವರೆಗೆ ಯಾವುದೇ ಝರಾಕ್ಸ್ ಅಂಗಡಿ ತೆರೆಯುವಂತಿಲ್ಲ.
ಸಿಸಿಟಿವಿ ಕ್ಯಾಮೆರಾಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಳವಡಿಸಲಾಗಿದೆ. ಈ ಬಾರಿ 80 ಅಂಕಕ್ಕೆ ಪರೀಕ್ಷೆ ಬರೆಯಲಿದ್ದು, 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.
ಒಟ್ಟಾರೆ 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಹಾಲ್ ಟಿಕೆಟ್ ತೋರಿಸಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಬೆಳಗ್ಗೆ 10:30ಕ್ಕೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ 1:30ಕ್ಕೆ ಮುಗಿಯಲಿದೆ.