ಸುಪ್ರೀಂಕೋರ್ಟ್ ಸೂಚನೆಯಂತೆ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ನಡೆದ ನಂತರ ಚಿತ್ರದುರ್ಗದ ಐತಿಹಾಸಿಕ ಮುರುಘಾಮಠಕ್ಕೆ ಆಡಳಿತ ಸಮಿತಿ ನೇಮಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 3 ದಿನದಲ್ಲಿ ಆಡಳಿತ ಸಮಿತಿ ನೇಮಿಸಲು ಫೆಬ್ರವರಿ 28ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಆಡಳಿತ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ನೇಮಕ ಮಾಡಲಾಗಿದೆ.

. Ad Widget . Ad Widget . Ad Widget

ಸದ್ಯ ಮುರುಘಾ ಸ್ವಾಮೀಜಿ ಜಾಮೀನು ಮೇಲಿದ್ದು, ಅವರ ನಿಯಂತ್ರಣದಲ್ಲಿರುವ ಆಡಳಿತ ಪ್ರಶ್ನಿಸಿ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ನಂತರ ಸರ್ಕಾರಕ್ಕೆ ನೋಟಿಸ್ ನೀಡಿದ್ದ ಸುಪ್ರೀಂಕೋರ್ಟ್​ ಸೂಚನೆಯಂತೆ ಮಠಕ್ಕೆ ಇದೀಗ ಸರ್ಕಾರ ಆಡಳಿತ ಸಮಿತಿ ಅಧ್ಯಕ್ಷರ ನೇಮಿಸಿದೆ. ಸದ್ಯದಲ್ಲೇ ಆಡಳಿತ ಸಮಿತಿ ಸದಸ್ಯರ ನೇಮಕವಾಗುತ್ತದೆಯಂತೆ.

. Ad Widget .

Leave a Comment

Your email address will not be published. Required fields are marked *