Ad Widget .

ಲೋಕಸಭಾ ಚುನಾವಣಾ ಪೂರ್ವ ತಯಾರಿ/ 10 ದಿನಗಳಲ್ಲಿ 12 ರಾಜ್ಯಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ 10 ದಿನಗಳಲ್ಲಿ 12 ರಾಜ್ಯಗಳಿಗೆ ಭೇಟಿ ನೀಡಿ 29 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು-ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ, ದೆಹಲಿಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಧಾನಿ ಮೋದಿ ಮಾ.04 ರಂದು ತೆಲಂಗಾಣದ ಆದಿಲಾಬಾದ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಈ ಬಳಿಕ ತಮಿಳುನಾಡಿನ ಭಾರತೀಯ ಅಭಿಕಿಯ ವಿದ್ಯುತ್ ನಿಗಮ್ ಲಿಮಿಟೆಡ್ (ಭವಿನಿ)ಗೆ ಭೇಟಿ ನೀಡಲಿದ್ದಾರೆ. ಚೆನ್ನೈ ಹಾಗೂ ಆದಿಲಾಬಾದ್ ಗಳಲ್ಲಿ ಪ್ರಧಾನಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

Ad Widget . Ad Widget . Ad Widget .

ಮಾರ್ಚ್ 5 ರಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಒಡಿಶಾದಲ್ಲಿ ಹಲವಾರು ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

ಮಾರ್ಚ್ 6 ರಂದು ಅವರು ಕೋಲ್ಕತ್ತಾದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಮತ್ತು ಬರಾಸತ್‍ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಬಿಹಾರಕ್ಕೆ ತೆರಳಿ ಬೆಟ್ಟಿಯಾದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 7 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿರಲಿದ್ದು, ಸಂಜೆ ದೆಹಲಿಯಲ್ಲಿ ಮಾಧ್ಯಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ದೆಹಲಿಯಲ್ಲಿ ಮಾರ್ಚ್ 8 ರಂದು, ಮೊಟ್ಟಮೊದಲ ರಾಷ್ಟ್ರೀಯ ಸೃಷ್ಟಿಕರ್ತರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸಂಜೆ ಅಸ್ಸಾಂಗೆ ತೆರಳಿ, ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್‍ನಲ್ಲಿ ಸೆಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ ಮತ್ತು ನಂತರ ಇಟಾನಗರದಲ್ಲಿ ಬಹು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ.ನಂತರ, ಅವರು ಅಸ್ಸಾಂನ ಜೋರ್ಹತ್‍ನಲ್ಲಿ ಪೌರಾಣಿಕ ಅಹೋಮ್ ಸೇನಾ ಕಮಾಂಡರ್ ಲಚಿತ್ ಬೊರ್ಪುಕನ್ ಅವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಅವರು ಜೋರ್ಹತ್‍ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಳಿಕ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಸಿಲಿಗುರಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Leave a Comment

Your email address will not be published. Required fields are marked *