ಸಮಗ್ರ ನ್ಯೂಸ್: ಸಾವಿರಾರು ರೈತರು ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದ್ದು, ಮಾರ್ಚ್ 10ರಂದು ದೇಶಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.
ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ. ನಾವು ಪಂಜಾಬ್ ಹಾಗೂ ಹರಿಯಾಣದಿಂದ ಶಾಂತಿಯುತವಾಗಿಯೇ ದೆಹಲಿ ಪ್ರವೇಶಿಸುತ್ತೇವೆ. ಮಾರ್ಚ್ 6ರಂದು ದೇಶದ ಎಲ್ಲ ಪ್ರದೇಶಗಳಿಂದ ರೈತರು ದೆಹಲಿಗೆ ಆಗಮಿಸುತ್ತಾರೆ. ಮಾರ್ಚ್ 10ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಮಾಹಿತಿ ನೀಡಿದ್ದಾರೆ.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಜಾರಿಗೆ ತರಬೇಕು ಎಂಬುದಾಗಿ ರೈತರು ಪಟ್ಟು ಹಿಡಿದಿದ್ದಾರೆ. ಇದರ ಮಧ್ಯೆಯೇ, ದ್ವಿದಳ ಧಾನ್ಯಗಳು, ಜೋಳ, ಹತ್ತಿ ಸೇರಿ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವ ಕುರಿತು ಹೊಸ ಸಮಿತಿ ರಚಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಹಾಗೆಯೇ, ರೈತರಿಂದ ಕೃಷಿ ಉತ್ಪನ್ನಗಳ ಖರೀದಿಗೆ ಯಾವುದೇ ಮಿತಿ ಇರುವುದಿಲ್ಲ ಹಾಗೂ ಖರೀದಿಗಾಗಿ ವೆಬ್ ಪೆÇೀರ್ಟಲ್ ಅಭಿವೃದ್ಧಿಪಡಿಸಲಾಗುತ್ತದೆ ಎಂಬುದು ಸೇರಿ ಕೇಂದ್ರ ಸರ್ಕಾರವು ರೈತರಿಗೆ ಹಲವು ಆಫರ್ ನೀಡಿತ್ತು.