ಸಮಗ್ರ ಉದ್ಯೋಗ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್ ಅಸೋಸಿಯೇಟ್- II ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 6, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅನುಭವ:
ಅಭ್ಯರ್ಥಿಗಳು ಕೈಗಾರಿಕಾ ಮತ್ತು ಶೈಕ್ಷಣಿಕ ಸಂಸ್ಥೆಗಳು ಅಥವಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮತ್ತು ವೈಜ್ಞಾನಿಕ ಚಟುವಟಿಕೆಗಳು ಮತ್ತು ಸೇವೆಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 40,600
ಉದ್ಯೋಗದ ಸ್ಥಳ:
ಧಾರವಾಡ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.