Ad Widget .

ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್| ದ್ವೇಷ ರಾಜಕೀಯಕ್ಕೆ ಮುಂದಾಯಿತೇ ಕಾಂಗ್ರೆಸ್!?

ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ರವಿಯನ್ನು ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್ ದ್ವೇಷದ ರಾಜಕೀಯಕ್ಕೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯಸಭೆ ಚುನಾವಣೆ ವೇಳೆ ವಿಧಾನಸೌಧದಲ್ಲೇ ಪಾಕ್​ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಅದು ಪಾಕ್​ ಪರ ಘೋಷಣೆ ಅಲ್ಲ, ಬದಲಿಗೆ ಚುನಾವಣೆಯಲ್ಲಿ ಗೆದ್ದ ನಾಸಿರ್ ಹುಸೇನ್ ಪರ ಘೋಷಣೆ ಅಂತಾ ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ, ಇದೇ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Ad Widget . Ad Widget . Ad Widget .

ಬೆಂಗಳೂರಿನಲ್ಲಿ ಮೂವರು ಅರೆಸ್ಟ್ ಆಗುತ್ತಿದ್ದಂತೆ ಮಂಡ್ಯದಲ್ಲೂ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಸಮರ್ಥನೆ ಮಾಡಿಕೊಳ್ಳಲು ಬಿಜೆಪಿ ಮೇಲೆ ಕಾಂಗ್ರೆಸ್ ಗೂಬೆ ಕೂರಿಸಲು ಮುಂದಾಗಿದೆ ಎನ್ನಲಾಗುತ್ತಿದೆ.

2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ.

Leave a Comment

Your email address will not be published. Required fields are marked *