370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ

ಸಮಗ್ರ ನ್ಯೂಸ್: ಸಾಂವಿಧಾನಿಕವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು.

Ad Widget ... ..

ಇಂದು ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕಸಿತ್ ಭಾರತ, ವಿಕಸಿತ್ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರು. ಯೋಜನೆಯೊಂದಿಗೆ, ಬಹು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ.

Ad Widget

Leave a Comment

Your email address will not be published. Required fields are marked *