Ad Widget .

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ 102 ವರ್ಷದ ವೃದ್ದೆ

ಸಮಗ್ರ ನ್ಯೂಸ್: ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು 102 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಮೂಲದ ಪಾರ್ವತಮ್ಮ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ನಡೆಸಿದ್ದಾರೆ. ಹೀಗೆ

Ad Widget . Ad Widget .

ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ ನೀರು ದೊರೆಯುವಂತಾಗಬೇಕು. ಈ ಎಲ್ಲ ಬೇಡಿಕೆಗಳನ್ನು ದೇವರ ಮುಂದಿಟ್ಟುಕೊಂಡು ಮಹದೇಶ್ವರನ ದರ್ಶನಕ್ಕೆ ಬರುತ್ತಿದ್ದೇನೆ ಎಂದು ಪಾರ್ವತಮ್ಮ ಹೇಳಿದ್ದಾರೆ.

Ad Widget . Ad Widget .

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಜ್ಜಿ ಹೇಳಿದ್ದಾರೆ. ಜತೆಗೆ ಪಾದಯಾತ್ರೆ ಮಾಡುತ್ತಿದ್ದವರು, ‘ಅವರು ಯಾಕೆ ಪಿಎಂ ಆಗಬೇಕು?’ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ದೇಶಕ್ಕೆ ಒಳ್ಳೆಯದಾಗಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವೃದ್ಧೆ ಹೇಳಿದ್ದಾರೆ. ನಿಮ್ಮ ಆಶೀರ್ವಾದ ಇದ್ದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಿಯೇ ಆಗುತ್ತಾರೆ ಎಂದು ಸ್ಥಳದಲ್ಲಿ ಇದ್ದವರು ಹೇಳಿದ್ದಾರೆ.

Leave a Comment

Your email address will not be published. Required fields are marked *