ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್:2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಅದರಂತೆ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಗೊಂದಲಕ್ಕೀಡಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು.

Ad Widget ... ..

ಆದರೆ ಇದೇ ವಿಚಾರ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಸಂಬಂಧ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿತ್ತು. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ಎಂಬಾತ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಎ1 ಆರಾಧ್ಯ, ಎ2 ರವಿ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಜೊತೆಗೆ ರವಿಯನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸಲಾಗಿತ್ತು.

Ad Widget

ಈಗ ‘ಬಿಜೆಪಿ ಕಾರ್ಯಕರ್ತ, ಡಣಾಯಕನಪುರ ನಿವಾಸಿ ಆರೋಪಿ ರವಿ ಎಂಬಾತನಿಗೆ ಮಂಡ್ಯ ಪಿಸಿಜೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಮಂಡ್ಯದ ಪಶ್ಚಿಮ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತನನ್ನು ಕೋರ್ಟ್‌ಗೆ ಹಾಜರುಪಡಿಸಿ 2 ದಿನ ಪೊಲೀಸ್​ ಕಸ್ಟಡಿಗೆ ಪಡೆದಿದ್ದರು. ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ ಮಂಡ್ಯ ನ್ಯಾಯಾಲಯ, ಇದೀಗ ಬಿಜೆಪಿ ಕಾರ್ಯಕರ್ತ ರವಿಗೆ ಜಾಮೀನು ಮಂಜೂರು ನೀಡಿದೆ.

Leave a Comment

Your email address will not be published. Required fields are marked *