ಸಮಗ್ರ ಉದ್ಯೋಗ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಸೆಕ್ರೆಟರಿ- 64
ಅಕೌಂಟ್ಸ್ ಆಫೀಸರ್- 3
ಜೂನಿಯರ್ ಎಂಜಿನಿಯರ್- 17
ಜೂನಿಯರ್ ಟ್ರಾನ್ಸ್ಲೇಶನ್ ಆಫೀಸರ್-7
ಅಕೌಂಟೆಂಟ್-7
ಜೂನಿಯರ್ ಅಕೌಂಟೆಂಟ್-20
ಉದ್ಯೋಗದ ಸ್ಥಳ:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಕಾರ್ಯ ಕ್ಷಮತೆ ಮತ್ತು ಅನುಭವದ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳ ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ ಇನ್ನಿತರೆ ಮಾಹಿತಿಗಾಗಿ ಈ ಕೆಳಗೆ ನೀಡಲಾಗಿರುವ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.