ಪುತ್ತೂರು:ಬೈಕ್ ಸ್ಕಿಡ್ -ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಸಮಗ್ರ ನ್ಯೂಸ್ :ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‍ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಾಳು ಯುವಕ ಮೃತಪಟ್ಟಿದ್ದಾನೆ.

Ad Widget ... ..

ಪುತ್ತೂರು ಶಾಂತಿ ಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪ್ರಸಾದ್ (27) ಮೃತ ಯುವಕ. ಒಂದು ವಾರದ ಹಿಂದೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ಇಹಲೋಕ ತ್ಯಜಿಸಿದ್ದಾರೆ.

Ad Widget

ನಗರದ ಬೈಪಾಸ್ ನ ಗ್ಯಾರೇಜ್‍ನಲ್ಲಿ ಮೆಕ್ಯಾನಿಕ್ ಆಗಿದ್ದ ಪ್ರಸಾದ್ ಫೆ.29 ರಂದು ಬೈಕ್ ಚಲಾಯಿಸಿಕೊಂಡು ಹೋಗುವಾಗ ಸ್ಕಿಡ್ ಆಗಿ ಬಿದ್ದಿದ್ದರು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟಿದ್ದ ಪ್ರಸಾದ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತತ್‍ಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ಇಹಲೋಕ ತ್ಯಜಿಸಿದ್ದಾರೆ.

Leave a Comment

Your email address will not be published. Required fields are marked *