ಸಮಗ್ರ ನ್ಯೂಸ್: ಇಂದು ಅಂತರಾಷ್ಟ್ರೀಯ ಮಹಿಳಾ ದಿನ ಈ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ಒಂದು ಕಡೆ ಲೋಕ ಸಭಾ ಚುನಾವಣೆ ಮುಂದೆ ಬರುತ್ತಿದೆ. ಇದೆ ಸಮಯದಲ್ಲಿ ಸಿಲಿಂಡರ್ ಬೆಲೆ ಕಡಿಮೆ ಮಾಡಲಾಗಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.