ಹೆಬ್ರಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ.

Ad Widget ... ..

ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದ್ದು ಈ ಹಿನ್ನಲೆಯಲ್ಲಿ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದರೂ ಮಾನಸಿಕ ಖಿನ್ನತೆ ಕಡಿಮೆಯಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *