ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಸಪೋರ್ಟ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಮಂಡಳಿಯಿಂದ ಕಡ್ಡಾಯವಾಗಿ ರೂರಲ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್/ ಡೆವಲಪ್ಮೆಂಟ್/ಎಜುಕೇಶನ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹22,500
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.