ಶೃಂಗೇರಿ ಆಸಿಡ್ ದಾಳಿ ಪ್ರಕರಣ | ಆರೋಪಿಗಳಿಗೆ 20 ಲಕ್ಷ ದಂಡ ಸಹಿತ ಜೀವವಾಧಿ ಶಿಕ್ಷೆ ಪ್ರಕಟ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಮಹಿಳೆಯ ಮೇಲೆ ಆಸಿಡ್ ದಾಳಿ ಪ್ರಕರಣದ ತೀರ್ಪು ಇಂದು ಹೊರ ಬಿದ್ದಿದೆ. ನಾಲ್ವರು ಆರೋಪಿಗಳಿಗೆ ತಲಾ 5 ಲಕ್ಷ ರು ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Ad Widget ... ..

ಬರೋಬ್ಬರಿ ಆರು ವರ್ಷಗಳ ಬಳಿಕ ಪ್ರಕರಣದ ತೀರ್ಪು ಹೊರ ಬಿದ್ದಿದೆ. ಆರೋಪಿಗಳನ್ನು ಸುದೀರ್ಘ ವಿಚಾರಣೆ ಬಳಿಕ ಅಪರಾಧಿಗಳು ಎಂದು ಸಾಬೀತುಪಡಿಸಲಾಗಿದೆ. ಆರೋಪಿಗಳಾದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37) ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿಗಳು ಮೇಲ್ಮನವಿ ಸಲ್ಲಿಸುವುದಾದರೆ ಅದಕ್ಕಿಂತ ಮೊದಲು ತಲಾ 50% ದಂಡ ಪಾವತಿಸಲು ಆದೇಶಿಸಲಾಗಿದೆ. ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಲಯದ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ತೀರ್ಪು ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *