ಕಾಸರಗೋಡು: ಬೈಕ್ ಢಿಕ್ಕಿ | ಪಾದಚಾರಿ ಮೃತ್ಯು

ಕಾಸರಗೋಡು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಇಂದು (ಜು.15 ರಂದು) ನಡೆದಿದೆ.

Ad Widget ... ..

ಮೃತರನ್ನು ತೃಕ್ಕನ್ನಾಡ್ ನಿವಾಸಿ ರತೀಶ್ ( 37) ಎಂದು ಗುರುತಿಸಲಾಗಿದೆ. ಇವರು ಮೀನು ಕಾರ್ಮಿಕರಾಗಿದ್ದು, ರಾತ್ರಿ ಮನೆಗೆ ತೆರಳುತ್ತಿದ್ದಾಗ ಕಾಞ೦ಗಾಡ್ ಕಡೆಗೆ ತೆರಳುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ರತೀಶ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Leave a Comment

Your email address will not be published. Required fields are marked *