ಪುತ್ತೂರು :ಮನೆಯ ಆವರಣಗೋಡೆ ಕೆಡವಿ ಮಹಿಳೆಗೆ ಹಲ್ಲೆ-ದೂರು ದಾಖಲು

ಸಮಗ್ರ ನ್ಯೂಸ್: ಮನೆಯ ಕೌಂಪೌಂಡನ್ನು ಜೆಸಿಬಿ ಯಂತ್ರದ ಮೂಲಕ ಕೆಡವಿದ್ದಲ್ಲದೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿರುವುದಾಗಿ ಕಡಬ ಕೊಂಬಾರು ಗ್ರಾಮದ ಗಂಗಮ್ಮ(72) ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget ... ..

ಮಾ.10ರಂದು ನೆರೆಕೆರೆಯ ಸಂಬಂಧಿಯೂ ಆಗಿರುವ ಶಶಿಧರ ಎಂಬಾತ ಜೆಸಿಬಿ ಯಂತ್ರದ ಮೂಲಕ ಮನೆಯ ಆವರಣಗೋಡೆಯನ್ನು ಕೆಡವಿದ್ದು, ಇದನ್ನು ಪ್ರಶ್ನಿಸಿದಾಗ ಆತ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ್ದು, ಗಾಯಗೊಂಡ ಗಂಗಮ್ಮ ಅವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಗಂಗಮ್ಮ ನೀಡಿದ ದೂರಿನನ್ವಯ ಕಡಬ ಪೊಲೀಸರು ಅ.ಕ್ರ:34/2024 ಕಲಂ:447.427.323.504 ಐ.ಪಿ.ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *