ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಗಾಜಿಪುರದಲ್ಲಿ ಬಸ್ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ. ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ಪ್ರಕಾರ ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದು ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ
ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಬಸ್ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು. ಅದೇ ಸಂಧರ್ಭದಲ್ಲಿ ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂದಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ