ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಈಗಾಗಲೆ ತಯಾರಿ ನಡೆದಿದು, ಬಿಜೆಪಿ ಮೊದಲ ಪಟ್ಟಿಯು ಬಿಡುಗಡೆಯಾಗಿದೆ. ಆದರೆ ಈಗ ಕೆಲ ಕ್ಷೇತ್ರಗಳು ಕಗ್ಗಂಟಾಗಿದ್ದು, ಅಸಮಾಧಾನ ಬೆಂಕಿಯಿಂದ ಬೇಯುತ್ತಿರೋ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲು ಮಹತ್ವದ ಸಭೆ ನಡೆಸಲಾಗಿದೆ. ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳ 150 ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚಿಸಲಾಗಿದೆ. ಅದರಲ್ಲೂ ರಾಜ್ಯದಲ್ಲಿ ಕಗ್ಗಂಟಾಗಿರುವ ಕೆಲ ಕ್ಷೇತ್ರಗಳನ್ನ ಬಿಟ್ಟು ಸಿಂಗಲ್ ಹೆಸರು ಇರುವ ಕ್ಷೇತ್ರಗಳನ್ನ ಫೈನಲ್ ಮಾಡುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ 18 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಬಾಕಿ 10 ಕ್ಷೇತ್ರಗಳ ಟಿಕೆಟ್ ಗೊಂದಲ ಮುಂದುವರೆದಿದೆ. ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉತ್ತರ ಕನ್ನಡ ಅನಂತಕುಮಾರ್ ಹೆಗಡೆ, ಬೀದರ್ ಕ್ಷೇತ್ರದ ಭಗವಂತ್ ಖೂಬಾ, ದಾವಣಗೆರೆಯ ಸಿದ್ದೇಶ್ವರ್ಗೆ ಈ ಬಾರಿ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ತಿಳಿದುಬಂದಿದೆ.
ಪ್ರಮುಖವಾಗಿ ಗೊಂದಲದಲ್ಲಿರುವ ಕ್ಷೇತ್ರಗಳು;
ಮೈಸೂರು, 2.ಉತ್ತರಕನ್ನಡ, 3.ಚಾಮರಾಜನಗರ, 4.ಬೆಂಗಳೂರು ಉತ್ತರ. 5.ಚಿಕ್ಕಬಳ್ಳಾಪುರ. 6.ಚಿಕ್ಕಮಗಳೂರು, 7.ಹಾವೇರಿ, 8.ಬೆಳಗಾವಿ, 9.ಮಂಗಳೂರು, 10.ದಾವಣಗೆರೆ ಕ್ಷೇತ್ರದ ಟಿಕೆಟ್ ಕಗ್ಗಂಟಾಗಿ ಉಳಿದೆ. ಯಾಕಂದ್ರೆ, ಈ ಕ್ಷೇತ್ರಗಳಿಗೆ ಟಿಕೆಟ್ ಆಕಾಂಕ್ಷಿಗಳು ಇಬ್ಬರು-ಮೂವರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳ ಟಿಕೆಟ್ ಗೊಂದಲ ಮುಂದುವರೆದಿದೆ