ಅಡಿಕೆಯ ವೈಜ್ಞಾನಿಕ ಅಧ್ಯಯನಕ್ಕೆ ₹10 ಕೋಟಿ ಮೀಸಲು – ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರಿಸಿಕೊಂಡು ನಮ್ಮ ಭಾಗದ ಅಡಿಕೆಯ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ ₹10 ಕೋಟಿಯನ್ನು ಮೀಸಲಿಟ್ಟಿದೆ’ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Ad Widget ... ..

ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದ ಕಿದು ಸಿಪಿಸಿಆರ್‌ಐನಲ್ಲಿ ನಡೆದ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಈ ಹಿಂದಿನ ಸರ್ಕಾರ ವರದಿ ನೀಡಿದ್ದರಿಂದ ಅಡಿಕೆಯ ಧಾರಣೆ ಇಳಿಕೆಯಾಗಿತ್ತು. ಆದರೆ, ಅದರಿಂದ ಹಾನಿಯಾದ ನಿದರ್ಶನವಿಲ್ಲ ಎಂದರು.

‘ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನು ಕೇಂದ್ರದ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೆವು. ಬೆಳೆಗಾರರ ಪರವಾಗಿ ಪ್ರಧಾನಿ ಮೋದಿ ನಿಂತಿದ್ದರು. ಆದರೆ, ಈ ಬಗ್ಗೆ ವೈಜ್ಞಾನಿಕ ವರದಿಯ ಅಗತ್ಯವಿದ್ದು, ಕಾನೂನಾತ್ಮಕ ಕ್ರಮಕ್ಕೆ ಅವರು ಬೆಂಬಲ ಸೂಚಿಸಿದ್ದರು’ ಎಂದರು.

ಆಮದು ಇಲ್ಲ: ‘ಪುನಃ ಅಡಿಕೆ ಆಮದು ಮಾಡಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದುದು. 2020-21ರಲ್ಲಿ ಭೂತಾನ್‌ನಿಂದ ಅಡಿಕೆ ಆಮದಿಗೆ ಅನುಮತಿ ನೀಡಲಾಗಿತ್ತು. ಈ ವರ್ಷ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಲು ಅನುಮತಿ ನೀಡಿಲ್ಲ. ಅಡಿಕೆ ಆಮದು ಮಾಡಲಾಗುತ್ತಿದೆ ಎಂಬ ಸುದ್ದಿ ಹಬ್ಬಿಸಿ, ದರ ಕುಸಿತ ಮಾಡಿ ಗೊಂದಲ ಸೃಷ್ಟಿಸುವ ಸಂಚು ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಅಡಿಕೆಯ ಎಲೆಚುಕ್ಕಿ, ಹಳದಿ ಎಲೆ ರೋಗ ನಿರ್ವಹಣೆಗೆ ₹225 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಈ ಕುರಿತ ಅಧ್ಯಯನಕ್ಕೂ ಕೇಂದ್ರದಿಂದ ಕೋಟ್ಯಂತರ ರೂಪಾಯಿ ನೀಡಲಾಗಿದೆ’ ಎಂದರು.

Leave a Comment

Your email address will not be published. Required fields are marked *