ಮೆಣಸಿನಕಾಯಿ ದರ ಕುಸಿತ… ರೈತರ ಆಕ್ರೋಶ

ಸಮಗ್ರ ನ್ಯೂಸ್: ಒಂದೇ ದಿನ 20 ಸಾವಿರದಿಂದ 12 ಸಾವಿರಕ್ಕೆ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ.

Ad Widget ... ..

ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ APMC ಅಧ್ಯಕ್ಷರ ಕಾರಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯನ್ನು ಹಿಡಿದು ಹಿಗ್ಗಾಮುಗ್ಗಾ ತಳಿಸಿದ್ದಾರೆ. ಮಾರುಕಟ್ಟೆಯಲ್ಲಿದ್ದ ಸಿಸಿಕ್ಯಾಮರಾವನ್ನು ಧ್ವಂಸ ಮಾಡಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

Ad Widget

Leave a Comment

Your email address will not be published. Required fields are marked *