ಬಂಟ್ವಾಳ: ಮರಕ್ಕೆ ಬೈಕ್ ಢಿಕ್ಕಿ- ಸವಾರ ಸಾವು

ಸಮಗ್ರ ನ್ಯೂಸ್ :ಬೈಕ್ ಸವಾರನೋರ್ವ ಮರಕ್ಕೆ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಮುಂಜಾನೆ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.

Ad Widget ... ..

ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದನು. ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.

Ad Widget

ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *