ಸಮಗ್ರ ನ್ಯೂಸ್: ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮಂಜುನಾಥ್.ವಿ ಕೆ ಎಂಬ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್ ಮಾಡಿದ್ದಾರೆ.
ಜಿಲ್ಲೆಯ ಹಲವು ಭಾಗಗಳಲ್ಲಿ ಇಂತಹ ಪ್ರಕರಣ ಬೆಳಕಿಗೆ ಬರುತ್ತಲೆ ಇದೆ. ಅದ್ರೆ ಭ್ರಷ್ಟ ಅಧಿಕಾರಿಗಳನ್ನು ಬಂಧನ ಮಾಡುತ್ತಾರೆಯೆ ಹೊರತು, ಇಂತಹ ಪ್ರಕರಣವನ್ನು ಬ್ರೇಕ್ ಮಾಡಲು ಸಾಧ್ಯವಾಗಿಲ್ಲ.