ಲೋಕಸಭೆ ಚುನಾವಣೆ/ 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಕಾಂಗ್ರೆಸ್

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಅಸ್ಸಾಂ ರಾಜ್ಯದ 43 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗಿಲ್ಲ.

Ad Widget ... ..

ಕಾಂಗ್ರೆಸ್ ಮುಖಂಡರಾದ ಗೌರವ್ ಗೊಗೋಯ್ ಅಸ್ಸಾಂ ಜೋರ್ಹತ್‍ನಿಂದ, ಕಮಲ್‍ನಾಥ್ ಪುತ್ರ ನಕುಲ್‍ನಾಥ್ ಮಧ್ಯಪ್ರದೇಶದ ಚಿಂದ್ವಾರಾ ಕ್ಷೇತ್ರದಿಂದ, ಮತ್ತು ಅಶೋಕ್ ಗ್ರೆಹೋಟ್ ಪುತ್ರ ವೈಭವ್ ಗೆಹೋಟ್ ರಾಜಸ್ಥಾನದ ಜಲೋರ್‍ನಿಂದ ಸ್ಪರ್ಧೆ ಮಾಡಲಿದ್ದಾರೆ.

Ad Widget

‘ಸಿಇಸಿ ಸೋಮವಾರ ಸಭೆ ನಡೆಸಿ ಅಸ್ಸಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ಸುಮಾರು 43 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ’ ಎಂದು ಕಾಂಗ್ರೆಸ್ ನಾಯಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

Leave a Comment

Your email address will not be published. Required fields are marked *