Ad Widget .

ಲೋಕಸಭೆ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಜಾರಿದ್ರಾ ಖರ್ಗೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದು, ಒಂದು ವೇಳೆ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚುನಾವಣಾ ಕಣದಿಂದ ಹಿಂದೆ ಸರಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ನಾವು ಹಿಂದ ಸರಿಯುತ್ತಿದ್ದೇವೆ ಎಂದು ಸೂಚಿಸುವುದು ತಪ್ಪು. ನನಗೆ ಈಗ 83 ವರ್ಷ. ನೀವು (ಪತ್ರಕರ್ತರು) 60-65 ವರ್ಷಕ್ಕೆ ನಿವೃತ್ತಿ ಪಡೆಯುತ್ತೀರಿ. ನಾನು 83 ಆದ ಮೇಲೆ ನಿವೃತ್ತಿ ಪಡೆಯುವುದು ತಪ್ಪೇ ಎಂದು ಪ್ರಶ್ನಿಸಿದರು. ಹಾಗಾಗಿ ವಯಸ್ಸಿನ ಕಾರಣದಿಂದ ಈ ಬಾರಿ ಚುನಾವಣಾ ಸ್ಪರ್ಧೆಗೆ ಇಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

Ad Widget . Ad Widget . Ad Widget .

2009 ಮತ್ತು 2014 ರಲ್ಲಿ ಗುಲ್ಬರ್ಗದಿಂದ ಗೆದ್ದಿದ್ದ ಖರ್ಗೆ, 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತರು. ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಉನ್ನತ ನಾಯಕರೊಂದಿಗೆ ಸಮಾಲೋಚಿಸಿದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

ಖರ್ಗೆ ಸೇರಿದಂತೆ ಕಾಂಗ್ರೆಸ್‍ನ ಹಿರಿಯ ನಾಯಕರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆಯಿದೆ. ಖರ್ಗೆ ಅವರು ತಮ್ಮ ತವರು ಕ್ಷೇತ್ರವಾದ ಗುಲ್ಬರ್ಗದಿಂದ ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಿಲ್ಲಿಸಬಹುದು ಎಂಬ ಮಾಹಿತಿ ಲಭ್ಯವಿದೆ.

Leave a Comment

Your email address will not be published. Required fields are marked *