ಸಮಗ್ರ ನ್ಯೂಸ್: ಪಂಜಾಬ್ ಮತ್ತು ಹರಿಯಾಣದಲ್ಲಿ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಜಾರಿಗಾಗಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಆಯೋಜಿಸಿರುವ ಕಿಸಾನ್ ಮದ್ದೂರ್ ಮಹಾಪಂಚಾಯತ್ ನಲ್ಲಿ 30,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.
ಪಂಜಾಬ್ ಮತ್ತು ಹರಿಯಾಣದ ರೈತರು ಬುಧವಾರದಿಂದ ದೆಹಲಿಗೆ ಆಗಮಿಸುತ್ತಿದ್ದು, ಸುಮಾರು 800 ಟ್ರಕ್‍ಗಳು, ಬಸ್‍ಗಳು ಮತ್ತು ರೈಲುಗಳ ಮೂಲಕ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ.
ರಾಮಲೀಲಾ ಮೈದಾನದಲ್ಲಿ ಶಾಂತಿಯುತವಾಗಿ ನಡೆಯಲಿರುವ ಮಹಾಪಂಚಾಯತ್‍ಗಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.