ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೋಲಾರ ಮೂಲದ ಸಂಜಯ್ ಭುವನ್ (16) ಮೃತ ದುರ್ದೈವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಮಾ.12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ತಿಳಿದು NSUI ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಕಾಲೇಜಿಗೆ ಮುತ್ತಿಗೆ ಹಾಕಲಾಯಿತು. ಸ್ಥಳದಲ್ಲಿ ಬಿಗಿವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಕಾಲೇಜು ಬಳಿ ಭದ್ರತೆ ಒದಗಿಸಿದ್ದಾರೆ.
ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಷ್ಪಕ್ಷಪಾತ ತನಿಖೆ ಮಾಡುವಂತೆ ಪೊಲೀಸರಿಗೆ ವಿದ್ಯಾರ್ಥಿ ಸಂಘಟನೆ ಆಗ್ರಹ ಮಾಡಿದೆ.