ಸಮಗ್ರ ನ್ಯೂಸ್: ಹತ್ತು ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
2014ರ ಜುಲೈ 12ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಮರಳು ಹಾಗೂ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ನಿತಿನ್(37)ನನ್ನು ಆರಂಭದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ತದನಂತರ ಜಾಮೀನು ಪಡೆದು ಮುಂದಿನ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ನಿತಿನ್ ಬಂಟ್ವಾಳ ತಾಲೂಕಿನ ಸುಲ್ತಾಡಿ ಮನೆ, ಕರಿಯಂಗಳ ಗ್ರಾಮದವರು.
ಇನ್ಸ್ ಪೆಕ್ಟರ್ ನಂದೇಶ್ ಬಿ ಕುಂಬಾರ್ ನೇತೃತ್ವದಲ್ಲಿ ಬಜ್ಪೆ ಪೊಲೀಸರು ನಿತಿನ್ ನನ್ನು ಕಡಬದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧನದ ನಂತರ ನಿತಿನ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.