Ad Widget .

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಎ.19ರಿಂದ ಏಳು ಹಂತದಲ್ಲಿ ಮತದಾನ| ಜೂ.04ಕ್ಕೆ ಫಲಿತಾಂಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಾಣಾ ಆಯುಕ್ತ ರಾಜೀವ್‌ ಕುಮಾರ್, ಎಪ್ರಿಲ್‌ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್‌ .4 ರಂದು ಫಲಿತಾಂಶ ನಡೆಯಲಿದೆ ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಸ್ತುತ ಲೋಕಸಭೆಯ ಅವಧಿ ಜೂನ್‌ 16ಕ್ಕೆ ಕೊನೆಗೊಳ್ಳಲಿದೆ. ಅದಕ್ಕೆ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ. 10 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇರಲಿವೆ. ಸುಮಾರು 97 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನಕ್ಕೆ 55 ಲಕ್ಷ EVM ಬಳಕೆಯಾಗಲಿದೆ. 12 ರಾಜ್ಯಗಳಲ್ಲಿ ಪುರುಷ ಮತದಾರರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ರಾಜೀವ್‌ ಕುಮಾರ್ ತಿಳಿಸಿದ್ದಾರೆ.

Ad Widget . Ad Widget . Ad Widget .

49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ ಮತ್ತು 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.

85 ವರ್ಷ ಮೇಲ್ಪಟ್ಟವರಿಗೆ ಹಾಗೂ ಶೇ. 40ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಇರುವವರಿಗೆ ಮನೆಯಿಂದಲೇ ಮತದಾನ ಅವಕಾಶ ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ಮಾಹಿತಿ ಕೇಂದ್ರ, ಕುಡಿಯುವ ನೀರಿನ ವ್ಯವಸ್ಥೆ ಇರಲಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸಾರ್ವಜನಿಕರಿಗೆ ನೀಡುವುದು ಕಡ್ಡಾಯ. ಮತದಾನದ ವೇಳೆ ಗಲಬೆ ನಡೆಸಿದರೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗುವುದು. ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಚುನಾವಣಾ ನಿಯಂತ್ರಣ ಕೊಠಡಿ ಸ್ಥಾಪನೆ. ಗಡಿ ಭಾಗದಲ್ಲಿ ಚೆಕ್‌ ಪೋಸ್ಟ್ ಸ್ಥಾಪನೆ ಹಾಗೂ ಡ್ರೋನ್ ಕಣ್ಗಾವಲು ಇರಲಿದೆ. ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್‌ ಕುಮಾರ್ ಹೇಳಿದ್ದಾರೆ.

Leave a Comment

Your email address will not be published. Required fields are marked *