ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಹುದ್ದೆಯ ಮಾಹಿತಿ:
ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ (RPC)- 70
ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ (HK)- 6
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC, ಡಿಪ್ಲೊಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಉದ್ಯೋಗದ ಸ್ಥಳ:
ಕರ್ನಾಟಕ
ವೇತನ:
ಮಾಸಿಕ ₹ 33,450- 62,600
ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://kpsconline.karnataka.gov.in/HomePage/index.html# apply here
ಏಪ್ರಿಲ್ 22, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.