Ad Widget .

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ಸಮಗ್ರ ನ್ಯೂಸ್: ‘ದತ್ತಾಜೀ’ ಎಂದೇ ಸಂಘ ಪರಿವಾರ ವಲಯದಲ್ಲಿ ಚಿರಪರಿಚಿತರಾಗಿರುವ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಪುನರಾಯ್ಕೆ ಆಗಿದ್ದಾರೆ.
ನಾಗಪುರದ ರೇಶಿಂಬಾಗ್ ನ ಸ್ಮೃತಿ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಬೈಠಕ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಜವಾಬ್ದಾರಿ ನೀಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದತ್ತಾತ್ರೇಯ ಹೊಸಬಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. 1968ರ ವೇಳೆ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಮತ್ತು ಎಬಿವಿಪಿ ಜೊತೆ ನಿಕಟ ಬಾಂಧವ್ಯ ಹೊಂದಿದ ಇವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‍ನಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಶಿಕ್ಷಣ ಪಡೆದಿದ್ದಾರೆ. 1975ರ ತುರ್ತುಪರಿಸ್ಥಿತಿ ವಿರೋಧಿಸಿ ಹೋರಾಡಿ ಮೀಸಾ ಕಾನೂನಿನ ಅನ್ವಯ ಎರಡು ವರ್ಷ ಸೆರೆಮನೆ ವಾಸ ಅನುಭವಿಸಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ, ಆರೆಸ್ಸೆಸ್‍ನ ಪ್ರಮುಖರಾದ ಹೊ.ವೆ. ಶೇಷಾದ್ರಿ ಅವರೊಂದಿಗೆ ತುರ್ತುಪರಿಸ್ಥಿತಿ ಹೋರಾಟದ ಕುರಿತ ಗ್ರಂಥ ‘ಭುಗಿಲು’ ರಚನೆಯಲ್ಲಿ ಸಹಭಾಗಿತ್ವ ವಹಿಸಿದ್ದರು.

Ad Widget . Ad Widget . Ad Widget .

2002ರಲ್ಲಿ ಹೊಸಬಾಳೆ ಅವರಿಗೆ ಸಂಘದ ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖ್ ಹೊಣೆಗಾರಿಕೆ ನೀಡಲಾಯಿತು. 2009ರಲ್ಲಿ ಸಂಘದ ಸಹಸರಕಾರ್ಯವಾಹರಾಗಿ ಜವಾಬ್ದಾರಿ ವಹಿಸಲಾಗಿತ್ತು. 2021ರಲ್ಲಿ ಸಂಘದ ಸರಕಾರ್ಯವಾಹರಾಗಿ ಆಯ್ಕೆಯಾಗಿದ್ದರು.

Leave a Comment

Your email address will not be published. Required fields are marked *