ಸಮಗ್ರ ನ್ಯೂಸ್: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು.
ಈ ಹಿಂದೆ ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಅದಾದ ಬಳಿಕ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠವು, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು.
ಅದಾದ ಬಳಿಕ 5, 8 ಹಾಗೂ 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಜೊತೆಗೆ ಮೇಲ್ಮನವಿ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.