Ad Widget .

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ|ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

Ad Widget . Ad Widget .

ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

Ad Widget . Ad Widget .

ಬಿಜೆಪಿ ರಾಜ್ಯ ಸಮಿತಿಯ ಪಧಾಧಿಕಾರಿ
ಯಮುನಾ ಚಂಗಪ್ಪ ಅಲಿಯಾಸ್ ಯಮುನಾ ಅಕ್ಕಮ್ಮ ಪತಿ ಚಂಗಪ್ಪ ಎಂ.ಎಸ್ ರವರು ಮಾ.17 ರಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪಾಕಿಸ್ತಾನ ದಿಂದ 10ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ನೀಡಿದ SBl ಎಂಬ ಸುಳ್ಳು ಪೋಸ್ಟ್ ನ್ನು ಹರಿಯ ಬಿಟ್ಟಿದ್ದು.ಇದು ಚುನಾವಣೆ ನೀತಿ ಸಂಹಿತೆಗೆ ವಿರುದ್ದವಾಗಿದ್ದು ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಆಗಿದೆ.ಆದ್ದರಿಂದ ಕೂಡಲೇ ಯಮುನಾ ಚಂಗಪ್ಪನವರ ವಿರುದ್ಧ FIR ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ರವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚುನಾವಣೆ ಆಯೋಗ ಕಟ್ಟು ನಿಟ್ಟಾಗಿ ನಿಯಮ ಪಾಲಿಸುತ್ತಿರುವ ಹಿನ್ನಲೆಯಲ್ಲಿ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.

Leave a Comment

Your email address will not be published. Required fields are marked *