ಸಮಗ್ರ ನ್ಯೂಸ್:ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ ನೀಡಲಿದೆ. ಈ ಪುರಸ್ಕಾರಕ್ಕೆ ಸುಳ್ಯದ ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆ ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆ.
ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು 2100 ಕ್ಕೂ ಅಧಿಕ ತರಬೇತಿಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾ.29 ರಂದು ಬೆಂಗಳೂರಿನ ಬಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆಯುವ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಅನುರಾಧಾ ಕುರುಂಜಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದು, ರಾಜ್ಯದ 25 ಮಹಿಳಾ ಸಾಧಕಿಯರು ಪುರಸ್ಕಾರ ಪಡೆಯಲಿದ್ದಾರೆ. ಇದೇ ದಿನ ನಡೆಯುವ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೂ ಅವರು ತಮ್ಮ ಸ್ವರಚಿತ ಕವನವನ್ನು ವಾಚಿಸಲಿರುವ ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ, ಚಂದ್ರಶೇಖರ ಬಿಳಿನೆಲೆಯವರ ಪತ್ನಿ.