ಸಮಗ್ರ ಉದ್ಯೋಗ: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಜನರಲ್ ಡ್ಯೂಟಿ, ಸಿಪಾಯಿ ಫಾರ್ಮಾ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 22, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ:
ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ (NA) -12 ನೇ ತರಗತಿ
ಸಿಪಾಯಿ ಫಾರ್ಮಾ- 12ನೇ ತರಗತಿ, ಡಿಪ್ಲೊಮಾ, ಬಿ.ಫಾರ್ಮಾ
ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) -10 ನೇ ತರಗತಿ
ಅಗ್ನಿವೀರ್ ಜನರಲ್ ಡ್ಯೂಟಿ (ಎಲ್ಲಾ ಆರ್ಮ್ಸ್)- 10ನೇ ತರಗತಿ
ಅಗ್ನಿವೀರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)- 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ
ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್) 12ನೇ ತರಗತಿ
ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (ಎಲ್ಲಾ ಆರ್ಮ್ಸ್) 08ನೇ ತರಗತಿ, 10ನೇ ತರಗತಿ
ವಯೋಮಿತಿ:
ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ (NA) -17.5- 23 ವರ್ಷ
ಸಿಪಾಯಿ ಫಾರ್ಮಾ- 19-25 ವರ್ಷ
ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) -17.5- 21 ವರ್ಷ
ಅಗ್ನಿವೀರ್ ಜನರಲ್ ಡ್ಯೂಟಿ (ಎಲ್ಲಾ ಆರ್ಮ್ಸ್)- 17.5- 21 ವರ್ಷ
ಅಗ್ನಿವೀರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)- 17.5- 21 ವರ್ಷ
ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್)-17.5- 21 ವರ್ಷ
ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (ಎಲ್ಲಾ ಆರ್ಮ್ಸ್)-17.5- 21 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು- 250 ರೂ.
ಪಾವತಿಸುವ ಬಗೆ- ಆನ್‌ಲೈನ್
ವೇತನ:
ಮಾಸಿಕ ₹ 30,000-40,000
ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ದೈಹಿಕ ಸಾಮರ್ಥ್ಯ ಪರೀಕ್ಷೆ
ಹೊಂದಿಕೊಳ್ಳುವಿಕೆ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಆನ್‌ಲೈನ್ ಪರೀಕ್ಷೆ
ಸಂದರ್ಶನ