ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಮೀಪ ಪ್ರವಾಸಿಗರಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಇಂದು (ಮಾ.21) ಬೆಳಗ್ಗೆ ನಡೆದಿದೆ.
ಕಾಡಾನೆಯ ಲಗ್ಗೆಯಿಂದ ಕಾರಿಗೆ ಹಾನಿಯಾಗಿದ್ದು, ಅದರಲ್ಲಿದ್ದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ಸಂಭಂದ ಅರಣ್ಯ ಇಲಾಖೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.