ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಎಂಎಲ್ಸಿ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.
ಈ ಮೊದಲು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನಿರಾಕರಿಸಲ್ಪಟ್ಟ ಕಾರಣ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳು, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಮತ್ತು ಹೊನ್ನಾಳಿ ತಾಲೂಕುಗಳ ವ್ಯಾಪ್ತಿಯನ್ನು ನೈಋತ್ಯ ಪದವೀಧರ ಕ್ಷೇತ್ರ ಒಳಗೊಂಡಿದೆ.