ಸಮಗ್ರ ನ್ಯೂಸ್: ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಇತ್ತ ಬಂಧಿತರಾಗಿರುವ ಪ್ರತಿವಾದಿಯು ಮುಖ್ಯಮಂತ್ರಿ ಕಚೇರಿಯನ್ನು ಹೊಂದಿದ್ದಾರೆ. ಅವರು ಕಸ್ಟಡಿಯಲ್ಲಿರುವ ಕಾರಣ ಸಾರ್ವಜನಿಕ ಸೇವಕರಾಗಿ ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ನಿವರ್ಹಿಸೋದು ಸಾಧ್ಯವಾಗೋದಿಲ್ಲ. ಈ ಕಾರಣಕ್ಕಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಬಿಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದರೆ ಆಮ್ ಆದ್ಮಿ ಪಕ್ಷದ ನಾಯಕರು ಕೇಜ್ರಿವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಮತ್ತು ಅಗತ್ಯವಿದ್ದರೆ ಅವರು ಜೈಲಿನಿಂದಲೇ ಸರ್ಕಾರವನ್ನು ನಡೆಸುತ್ತಾರೆ ಎಂದು ಹೇಳಿದ್ದಾರೆ.