Ad Widget .

ದೇವಸ್ಥಾನಗಳಲ್ಲಿ ಅನ್ನದಾನ ನಡೆಸಲು ಶೀಘ್ರದಲ್ಲೇ ತೀರ್ಮಾನ- ಸಚಿವ ಕೋಟ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಡುಪಿ: ದೇವಸ್ಥಾನಗಳು ಈಗಾಗಲೇ ಭಕ್ತರಿಗೆ ಮುಕ್ತವಾಗಿವೆ. ದೂರದಿಂದ ಭರುವ ಭಕ್ತರಿಗೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಸೀಮಿತ ಭಕ್ತರಿಗೆ ದೇವಾಲಯದಲ್ಲಿ ಅನ್ನದಾಸೋಹ ನಡೆಸಲು ಚರ್ಚಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿಯವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ತೀರ್ಮಾನ ತಗೆದುಕೊಳ್ಳಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Ad Widget . Ad Widget . Ad Widget .


ಕುಂದಾಪುರ ಕಾಳವರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ದೇವಸ್ಥಾನಗಳ ಮೇಳಗಳ ಕಲಾವಿದರಿಗೆ ಪೂರ್ಣ ಸಂಭಾವನೆ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಬಹುತೇಕ ದೇವಸ್ಥಾನಗಳಲ್ಲಿ ಈಗಾಗಲೇ ವೇತನ ಪಾವತಿ ಮಾಡಲಾಗಿದೆ. ಮಾರಣಕಟ್ಟೆ ಯಲ್ಲಿ ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲಾ ಮಟ್ಟದ ಅಧಿಕಾರಿ ಗಳು ಮಾರಣಕಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸಂಬಳ ಬಿಡುಗಡೆ ಮಾಡು ವಂತೆ ಸೂಚನೆ ಕೊಟ್ಟಿದ್ದೇನೆ. ಪೂರ್ತಿ ಸಂಬಳ ಕೊಡುವ ಬಗ್ಗೆ ಅವರು ಒಪ್ಪಿಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ಪಾವತಿಯಾಗಲಿದೆ ಎಂದರು.

ದೇವಸ್ಥಾನದಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳನ್ನು ಅಂತರಜಿಲ್ಲೆಯ ಒಳಗಡೆ ವರ್ಗಾವಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಒಳ್ಳೆಯ ಕೆಲವ ಮಾಡುವ ಸಿಬ್ಬಂದಿಗಳ ಸೇವೆ ಎಲ್ಲ ಕಡೆ ಸಿಗಬೇಕು ಎನ್ನುವ ಉದ್ದೇಶದಿಂದ ವರ್ಗಾವಣೆ ಬಗ್ಗೆ ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.

Leave a Comment

Your email address will not be published. Required fields are marked *