ಸಮಗ್ರ ನ್ಯೂಸ್: ಐಪಿಎಲ್ನ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಸ್ಪೈಡರ್ ಕ್ಯಾಮೆರಾದ ಕೇಬಲ್ ಏಕಾಏಕಿ ತುಂಡಾಗಿ ಪಿಚ್ ಮೇಲೆ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಆಟ ಸ್ಥಗಿತಗೊಂಡಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ್ ರಾಯಲ್ಸ್ 2 ಎಸೆತಗಳನ್ನು ಎದುರಿಸಿದ್ದ ವೇಳೆ ಸ್ಪೈಡರ್ ಕ್ಯಾಮೆರಾದ ಕೇಬಲ್ ತುಂಡಾಗಿ ಪಿಚ್ ಮೇಲೆ ಬಿದ್ದಿತು. ಇದರಿಂದ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಬಳಿಕ ಮೈದಾನ ಸಿಬ್ಬಂದಿಗಳು ಇದನ್ನು ತೆರವುಗೊಳಿಸಿ ಸರಿಪಡಿಸಿದ ಬಳಿಕ ಪಂದ್ಯವನ್ನು ಮುಂದುವರಿಸಲಾಯಿತು.