ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ!

ಸಮಗ್ರ ನ್ಯೂಸ್‌ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಟೊಯೊಟಾ ಫಾರ್ಚೂನರ್ಕಾರನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳ್ಳತನವಾಗಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Ad Widget ... ..

ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನಿಲ್ಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

Ad Widget

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ, ಪ್ರಯತ್ನಗಳ ಹೊರತಾಗಿಯೂ, ವಾಹನದ ಯಾವುದೇ ಕುರುಹು ಇನ್ನೂ ಲಭ್ಯವಾಗಿಲ್ಲ. ಕಳ್ಳತನವಾದ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *