ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಇದರ ಮದ್ಯೆ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ.
ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು BWSSB ಇತ್ತೀಚೆಗೆ ಆದೇಶದಲ್ಲಿ ತಿಳಿಸಿದೆ. ಆದರೆ ಈ ಆದೇಶವನ್ನು ಕೆಲವರು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.