ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಬ್ರಹ್ಮ ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ. ಹಿಂದುತ್ವದ ಪ್ರಬಲ ಪ್ರತಿಪಾದಕರಿಗೆ ಹಿನ್ನಡೆಯಾಗುತ್ತಿದೆ. ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದೆ. ಇದೆಲ್ಲದರ ವಿರುದ್ಧ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆಗೆ ಕಾಂಗ್ರೆಸ್ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ- ಕಾಂಗ್ರೆಸ್ ಹೊಂದಾಣಿಕೆ ಆಗಿದೆ. ಕಾಂಗ್ರೆಸ್ನಿಂದ ಡಮ್ಮಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬ ವಾಸ್ತವ ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿದಿದೆ ಎಂದರು.
ಚುನಾವಣೆ ಸ್ಪರ್ಧೆಯ ತೀರ್ಮಾನದಿಂದ ಹಿಂದಕ್ಕೆ ಸರಿಯುವಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಪದೇಪದೇ ಪೋನ್ ಮಾಡಿ ಒತ್ತಡ ಹೇರುತ್ತಿದ್ದಾರೆ. ಹಾಗಾಗಿ ಮೊದಲ ದಿನವೇ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು