ನವದೆಹಲಿ: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದ್ದು, ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS)ನಲ್ಲಿ ಹಕ್ಕಿಜ್ವರ (Bird Flu)ದಿಂದ 12ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಹಕ್ಕಿ ಜ್ವರದಿಂದ ಸತ್ತ ಮೊದಲ ಪ್ರಕರಣ ಇದಾಗಿದ್ದು, ಆತಂಕ ಮೂಡಿಸಿದೆ. ಏಮ್ಸ್ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ H5N1 (ಹಕ್ಕಿಜ್ವರ)ಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ.
ಇನ್ನು ಹಕ್ಕಿ ಜ್ವರ ಸಾಂಕ್ರಾಮಿಕ ಆಗಿರುವ ಕಾರಣಕ್ಕೆ ಬಾಲಕನ ಸಂಪರ್ಕಕ್ಕೆ ಬಂದ ದೆಹಲಿ ಏಮ್ಸ್ನ ಎಲ್ಲ ಸಿಬ್ಬಂದಿಯೂ ಐಸೋಲೇಟ್ಗೆ ಒಳಗಾಗಿದ್ದಾರೆ. ಈ ಬಗ್ಗೆ ಎಎನ್ಐ ಜತೆ ಮಾತನಾಡಿದ ಏಮ್ಸ್ ವೈದ್ಯರೊಬ್ಬರು, ಈ ಬಾಲಕನಿಗೆ ಲ್ಯುಕೋಮಿಯಾ ಮತ್ತು ನ್ಯುಮೋನಿಯಾ ಕೂಡ ಇತ್ತು. ಆತನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.