ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಸಲಾದ ಪೋನ್ ಕದ್ದಾಲಿಕೆ ಪ್ರಕರಣ ಮತ್ತಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ತನಿಖಾಧಿಕಾರಿಗಳು, ಹಾಲಿ ಸಿಎಂ ರೇವಂತ್ ರೆಡ್ಡಿ ಅವರಪೋನ್ ಕದ್ದಾಲಿಕೆ ಮಾಡಲು, ಅವರ ಮನೆ ಸಮೀಪದಲ್ಲೇ ಕಚೇರಿಯೊಂದನ್ನು ತೆರೆಯಲಾಗಿತ್ತು ಮತ್ತು ಇಸ್ರೇಲಿನಿಂದ ತಂದ ಉಪಕರಣ ಇರಿಸಿ ಫೆÇೀನ್ ಕದ್ದಾಲಿಸಲಾಗುತ್ತಿತ್ತು. ಈ ಉಪಕರಣ 300 ಮೀಟರ್ ವ್ಯಾಪ್ತಿಯ ಯಾವುದೇ ಕರೆ ಆಲಿಸುವ ಶಕ್ತಿ ಹೊಂದಿತ್ತು ಎಂದು ತಿಳಿಸಿದ್ದಾರೆ.
ಇಂಥ ಗೂಢಚರ್ಯ ಉಪಕರಣದ ತರಿಸಲು ಕೇಂದ್ರದ ಅನುಮತಿ ಕಡ್ಡಾಯವಾಗಿದ್ದು, ಆದರೆ ಸಾಫ್ಟ್‍ವೇರ್ ಕಂಪನಿಯ ಹೆಸರಲ್ಲಿ ಈ ಉಪಕರಣ ತರಿಸಲಾಗಿತ್ತು. ಇದನ್ನು ಬಳಸಿಕೊಂಡು ಕಾಂಗ್ರೆಸ್, ಬಿಜೆಪಿ ನಾಯಕರು, ಉದ್ಯಮಿಗಳು, ನಟ-ನಟಿಯರ ಪೋನ್ ಕದ್ದಾಲಿಕೆ ನಡೆಸಲಾಗುತ್ತಿತ್ತು ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಉದ್ಯಮಿಗಳ ಪೋನ್ ಕದ್ದಾಲಿಕೆ ಮಾಡಿ ಬಳಿಕ ಅದನ್ನು ಆಧರಿಸಿ ಅವರನ್ನು ಬ್ಲಾಕ್‍ಮೇಲ್ ಮಾಡಲಾಗುತ್ತಿತ್ತು. ಅವರಿಂದ ಬಿಆರ್‍ಎಸ್ ಪಕ್ಷಕ್ಕೆ ಹೆಚ್ಚಿನ ನಿಧಿ ಸಂಗ್ರಹಿಸಲಾಗುತ್ತಿತ್ತು. ಈ ಪೋನ್ ಕದ್ದಾಲಿಕೆ ಪ್ರಕರಣದಿಂದಾಗಿ ಸೆಲೆಬ್ರಿಟಿ ದಂಪತಿಗಳು ವಿಚ್ಛೇದನ ಕೂಡಾ ಪಡೆಯುವಂತಾಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಈಗಾಗಲೇ ಮೂವರು ಹಿರಿಯ ಪೆÇಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಕೆಲವರ ಪತ್ತೆಗೆ ಲುಕೌಟ್ ನೋಟಿಸ್ ಕೂಡಾ ಜಾರಿ ಮಾಡಲಾಗಿದೆ.