Ad Widget .

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚೀಫ್ ಇಂಜಿನಿಯರ್ ರಂಗನಾಥ್ ಅವರಿಗೆ ಸೇರಿದ ಐದು ಕಡೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್. ರೇವಣಕರ್ ಅವರ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್​​ನಲ್ಲಿರುವ ಮನೆ ಮತ್ತು ಕಚೇರಿ ಮೇಲೆ, ಬೀದರ್​ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್​ ಶಿವಕುಮಾರ್​ ಸ್ವಾಮಿ ಅವರಿಗೆ ಸೇರಿದ ಬೀದರ್​ ನಗರದ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿ ನಗರದ ಎಂ.ಬಿ. ಕಾಲೋನಿಯಲ್ಲಿರುವ ಮನೆ ಮೇಲೆ, ಚನ್ನಪಟ್ಟಣ ತಾಲೂಕಿನ ಮೈಲನಾಯಕನ ಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶೀಬಾ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Ad Widget . Ad Widget . Ad Widget .

ಚಿಕ್ಕಬಳ್ಳಾಫುರ ಕೆಆರ್​ಡಿಎಲ್​ನ ಅಧಿಕಾರಿ ಸದಾಶಿವಯ್ಯ ಅವರಿಗೆ ಸೇರಿದ ನಾಲ್ಕು ಮನೆಗಳು ಹಾಗೂ ಕಚೇರಿ ಮೇಲೆ, ವಿಜಯಪುರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ ತೀರ್ಥ ಅವರ ನಿವಾಸ,ವಧಾರವಾಡದ ಮೂಕಾಂಬಿಕಾ ನಗರದಲ್ಲಿರುವ ಅರಣ್ಯ ಸಂಶೋಧನಾ ವಿಭಾಗದ ಆರ್‌ಎಫ್‌ಒ ಮಹೇಶ್ ಹಿರೇಮಠ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

Leave a Comment

Your email address will not be published. Required fields are marked *