ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ಆಪರೇಷನ್ ಹಸ್ತಕ್ಕೆ ಬಿ.ವೈ ವಿಜಯೇಂದ್ರ ಚೆಕ್ ಮೇಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದರು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂಗೆ ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ ಪಕ್ಷ ಬಿಟ್ಟು ಕಾಂಗ್ರೆಸ್​​ ಸೇರಲು ಮುಂದಾಗಿದ್ದ ಮುಖಂಡನನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget ... ..

ಸದಾನಂದ ಅವರು ಇಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದರು. ಹೀಗಾಗಿ ಮಂಗಳವಾರ ರಾತ್ರಿ ಅವರನ್ನು ಭೇಟಿಯಾಗಿ ಮಾತನಾಡಿದ್ದ ವಿಜಯೇಂದ್ರ ಸಿಹಿ ತಿನಿಸಿ ಪಕ್ಷದಲ್ಲೇ ಉಳಿಸಿಕೊಂಡಿದ್ದಾರೆ. ಈ ಮೂಲಕ ‘ಕೈ’ ನಾಯಕರಿಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

Ad Widget

ಮೈಸೂರಿಗೆ ಈಗಾಗಲೇ ಬಿ.ವೈ ವಿಜಯೇಂದ್ರ ಹೋಗಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆ
ಭೇಟಿ ನೀಡಿದ್ದಾರೆ. ಇದಾದ ನಂತರ ಇಂದು ಸಂಜೆಯವರೆಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಕ್ರಮದಲ್ಲಿ‌ ವಿಜಯೇಂದ್ರ ಭಾಗಿಯಾಗಲಿದ್ದಾರೆ.

Leave a Comment

Your email address will not be published. Required fields are marked *