ಸಮಗ್ರ ನ್ಯೂಸ್: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪತ್ನಿ ಅಂಜಲಿ ನಿಂಬಾಳ್ಕರ್ ಪರವಾಗಿ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದಡಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಹೇಮಂತ್ ನಿಂಬಾಳ್ಕರ್ ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳುತ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ ಬೀರಬಹುದು ಎಂದು ವರ್ಗಾವಣೆ ಮಾಡಿದೆ.
ಪ್ರಧಾನಿ ಮೋದಿಯವರ ಹೆಸರು ಹಾಗೂ ಬಿಜೆಪಿಯ ನಕಲಿ ಚಿಹ್ನೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹಾಕಿದ್ದಾರೆ. ಇದರಿಂದ ಮತದಾರರು ಮೋಸ ಹೋಗುತ್ತಿದ್ದಾರೆ. ಹೀಗಾಗಿ ದೂರು ಕೊಟ್ಟಿದ್ದೇವೆ. ರಾಜ್ಯ ಸಚಿವರು ತಮ್ಮ ಅಧಿಕೃತ ಕಚೇರಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಮುಖ್ಯಸ್ಥ ವಿವೇಕ್ ರೆಡ್ಡಿ ಹೇಳಿಕೆ ನೀಡಿದ್ದಾರೆ.