ಕುಂದಾಪುರ: ಬೈಕ್ ಲಾರಿ ನಡುವೆ ಅಪಘಾತ| ಸವಾರ ಸಾವು, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್‌ : ಬೈಕ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

Ad Widget ... ..

ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಸಾವನ್ನಪ್ಪಿದವರು. ಗಂಭೀರ ಗಾಯಗೊಂಡವನನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ.

Ad Widget

ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ಗಾಯಾಳುವನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *